ಮನೆ ರಾಜ್ಯ ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ

0

ಬೆಂಗಳೂರು: ರಾಜ್ಯದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳು ಅಕ್ಟೋಬರ್ ಒಂದರಿಂದ ಜಾರಿಗೆ ಬರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮಂಗಳವಾರ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿ ಪ್ರಕಟಿಸಲಾಗಿದೆ. ಅಕ್ಷೇಪಣೆ, ಸಲಹೆಗಳನ್ನು ವಿಲೇವಾರಿ ಮಾಡಿದ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು’ ಎಂದರು.

ಹಿಂದಿನ ಐದು ವರ್ಷಗಳಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಪರಿಷ್ಕರಣೆ ಆಗಿರಲಿಲ್ಲ ಹಿಂದೆ ದರಗಳಲ್ಲಿ ಬಹಳ ವ್ಯತ್ಯಾಸಗಳಿದ್ದವು. ಈಗ ಆ ವ್ಯತ್ಯಾಸಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಶೇಕಡ 20 ರಿಂದ ಶೇಕಡ 50ರ ವರೆಗೆ ಹೆಚ್ಚಳ ಮಾಡಲಾಗಿದೆ. ಸರಾಸರಿ 30ರಷ್ಟು ದರ ಹೆಚ್ಚಳ ಮಾಡಲಾಗಿದೆ. ಇದರಿಂದ ಕಪ್ಪು ಹಣದ ವಹಿವಾಟಿನ ನಿಯಂತ್ರಣಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ದರ ಪರಿಷ್ಕರಣೆಯಿಂದ ಆರಂಭಿಕ ಅಂತದಲ್ಲಿ ಸ್ಥಿರಾಸ್ತಿ ಖರೀದಿ ಮಾರಾಟದ ನೋಂದಣಿ ತುಸು ಕಡಿಮೆ ಆಗಬಹುದು ನಂತರ ಸುಧಾರಣೆ ಆಗಲಿದೆ ನೋಂದಾಣಿ ಶುಲ್ಕ ಸಂಗ್ರಹದಲ್ಲಿ ಅಂದಾಜು 2,000 ಕೋಟಿಗೂ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದರು.

ಆಪ್ ಸಿದ್ದ. ಸರ್ಕಾರಿ ಜಮೀನುಗಳ ಸಮಗ್ರ ಮಾಹಿತಿ ಸಂಗ್ರಹ ಮತ್ತು ರಕ್ಷಣೆಗಾಗಿ ಮೊಬೈಲ್ ಆಪ್ ಸಿದ್ದಪಡಿಸಲಾಗಿದೆ. ಶೀಘ್ರದಲ್ಲೇ ಅದನ್ನು ಬಳಕೆಗೆ ತರಲಾಗುವುದು ಎಂದು ತಿಳಿಸಿದರು.

ಗ್ರಾಮ ಲೆಕ್ಕಿಗರು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳ ವಿವರಗಳನ್ನು, ಜಿಪಿಎಸ್ ಮಾಹಿತಿ ಸಮೇತ ದಾಖಲಿಸಬೇಕು. ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಫೋಟೋ ಸಮೇತ ಮಾಹಿತಿ ಅಪ್ಲೋಡ್ ಮಾಡಬೇಕು ಎಂದರು.

ಸರ್ಕಾರಿ ಜಮೀನುಗಳ ಕಬಳಿಕೆ ತಡೆಯಲು ಕಂದಾಯ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ತಂಡ ಒಂದನ್ನು ರಚಿಸಲಾಗುವುದು ಎಂದು ತಿಳಿಸಿದರು.

ಹಿಂದಿನ ಲೇಖನರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಲು ಪ್ರತ್ಯೇಕ ಕಾಯ್ದೆ ರೂಪಿಸಿ, ಜಾರಿಗೊಳಿಸಲು ನಿರ್ಧಾರ: ದಿನೇಶ್ ಗುಂಡೂರಾವ್
ಮುಂದಿನ ಲೇಖನಸಂಸತ್ ಇರುವುದು ಚರ್ಚೆ ನಡೆಸುವುದಕ್ಕೆ, ಪ್ರತಿಭಟನೆ ನಡೆಸುವುದಕ್ಕಲ್ಲ: ಯುವ ಸಂಸದರಿಗೆ ಎಚ್.ಡಿ ದೇವೇಗೌಡ ಕಿವಿಮಾತು