ಬೆಂಗಳೂರು: ಕೂಲಿ ಕಾರ್ಮಿಕ ಆನಂದ್ ಎಂಬಾತನನ್ನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕೆ.ಆರ್ ರಸ್ತೆಯ ಬಸ್ ನಿಲ್ದಾಣದ ಬಳಿ ಆನಂದ್ ಶವ ಪತ್ತೆಯಾಗಿದೆ.
ಕೆ.ಆರ್ಮಾರ್ಕೆಟ್ ನಲ್ಲಿ ಇತ ಕೂಲಿ ಕೆಲಸ ಮಾಡುತ್ತಿದ್ದ. ನಿನ್ನೆ ಜಗಳವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತನಿಖೆ ನಂತರ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.