ಮನೆ ರಾಷ್ಟ್ರೀಯ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಗಳಿಗೆ ಲಾರಿ ಡಿಕ್ಕಿ: ಐವರು ಸಜೀವ ದಹನ

ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಗಳಿಗೆ ಲಾರಿ ಡಿಕ್ಕಿ: ಐವರು ಸಜೀವ ದಹನ

0

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ​ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡಿದ್ದಾರೆ.

Join Our Whatsapp Group

ಮೃತರನ್ನು ಹರ್ಯಾಣದ  ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ  ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.

ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ವಾಹನಗಳು ಸುಟ್ಟುಹೋಗಿದ್ದು 12 ಗೋವುಗಳು ಸಹ ಸುಟ್ಟು ಕರಕಲಾಗಿವೆ.

ಡಿಕ್ಕಿಯ ನಂತರ ಉಂಟಾದ ಬೆಂಕಿ ಎಲ್ಲಾ ಮೂರು ಟ್ರಕ್‌ ಗಳನ್ನುಆವರಿಸಿತ್ತು. ಈ ಘಟನೆಯಲ್ಲಿ ಒಂದು ಟ್ರಕ್‌ ನ ಚಾಲಕ ಸೇರಿದಂತೆ ಐದು ಜನರು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ಜೈಪುರ ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಶರ್ಮಾ ತಿಳಿಸಿದ್ದಾರೆ.

ಎರಡು ಟ್ರಕ್‌ ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು  ಅಧಿಕಾರಿ ಹೇಳಿದ್ದಾರೆ.

ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದೆ.

ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪುರೋಹಿತ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನ40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ
ಮುಂದಿನ ಲೇಖನಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ 3 ವರ್ಷ ಜೈಲು , 2 ಲಕ್ಷ ಪರಿಹಾರ ನೀಡಲು ನ್ಯಾಯಾಲಯ ಆದೇಶ