ಮನೆ ರಾಜ್ಯ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

0

ನೆಲಮಂಗಲ : ಲಾರಿಯ ಇಂಜಿನ್‌ನಲ್ಲಿ ಉಂಟಾದ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ನಡೆದಿದೆ.

ಇಂದು (ಶನಿವಾರ) ಈರುಳ್ಳಿ ತುಂಬಿದ್ದ, ಲಾರಿ ಚಿತ್ರದುರ್ಗದಿಂದ ನೆಲಮಂಗಲದ ದಾಸನಪುರ ಎಪಿಎಂಸಿಗೆ ಬರುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಲಾರಿಯ ಇಂಜಿನ್‌ನಲ್ಲಿ ಶಾರ್ಟ್‌ಸರ್ಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಲಕ್ಷಾಂತರ ಮೌಲ್ಯದ ಈರುಳ್ಳಿ ಬೆಂಕಿಗಾಹುತಿಯಾಗಿದೆ.

ಈರುಳ್ಳಿ ನಾಶದಿಂದ ರೈತ ಕಂಗಾಲಾಗಿದ್ದು, ಲಾರಿಯ ಚಾಲಕ ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.