ಚಿಕ್ಕಮಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಲಾರಿಯೊಂದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಸೋಮವಾರ ಸಂಭವಿಸಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಲಾರಿ ಚಾಲಕನಿಗೆ ರಸ್ತೆ ಕಾಣದೆ ಡಿವೈಡರ್ ಮೇಲೇರಿದೆ. ಈ ವೇಳೆ ಅಲ್ಲಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆಯೇ ಬಿದ್ದಿದೆ. ಅದೃಷ್ಟವಶಾತ್ ಡಿಕ್ಕಿ ಹೊಡೆದ ಕೂಡಲೇ ಪವರ್ ಕಟ್ ಆದ ಹಿನ್ನೆಲೆಯಲ್ಲಿ ಸಂಭವನೀಯ ಅವಘಡ ತಪ್ಪಿದೆ, ಜೊತೆಗೆ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಮಹಾರಾಷ್ಟ್ರದಿಂದ ತರಕಾರಿ ಖರೀದಿಗಾಗಿ ಚಿಕ್ಕಮಗಳೂರಿಗೆ ಲಾರಿ ಬಂದಿತ್ತು ಎಂದು ಹೇಳಲಾಗಿದೆ.
Saval TV on YouTube