ಬೆಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ವೆಂಕಟೇಶ್ (50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಮೃತ ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಜೊತೆಗೆ ಇತ್ತ ಸಾಲಗಾರರ ಕಾಟವು ಹೆಚ್ಚಾಗಿತ್ತು. ಇದೆಲ್ಲದರಿಂದ ಮನನೊಂದು ಹೆಬ್ಬಾಳ ಬಳಿಯಲ್ಲಿರುವ ರೈಲ್ವೆ ಟ್ರ‍್ಯಾಕ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















