ಮನೆ ಅಪರಾಧ ಒಂದೇ ಕುಟುಂಬದ ಐವರನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಒಂದೇ ಕುಟುಂಬದ ಐವರನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

0

ಉತ್ತರಪ್ರದೇಶ: ವ್ಯಕ್ತಿಯೊಬ್ಬ ಹೆತ್ತ ತಾಯಿ, ಪತ್ನಿ, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಭಯಾನಕ ಘಟನೆ ಉತ್ತರಪ್ರದೇಶದ ಸೀತಾಪುರದಲ್ಲಿ ನಡೆದಿದೆ.

Join Our Whatsapp Group

ಮೃತರನ್ನು ತಾಯಿ ಸಾವಿತ್ರಿ ದೇವಿ (62), ಪತ್ನಿ ಪ್ರಿಯಾಂಕಾ ಸಿಂಗ್ (40), ಪುತ್ರಿಯಾರಾದ ಅಶ್ವಿ (12), ಅರ್ನಾ (08) ಪುತ್ರ ಆದ್ವಿಕ್ (04) ಆರೋಪಿ ಅನುರಾಗ್ ಸಿಂಗ್ (45) ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಮಥುರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಹತ್ಯೆಗೈದ ವ್ಯಕ್ತಿ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಹೇಳಿದ್ದಾರೆ. ತನ್ನ ತಾಯಿಯನ್ನು ಗುಂಡಿಕ್ಕಿ ಕೊಂದಿದ್ದು, ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದು ಹಾಕಿದ್ದಾನೆ. ಆ ಬಳಿಕ ಮೂವರು ಮಕ್ಕಳನ್ನು ಟೆರೇಸ್ ಮೇಲಿಂದ ಕೆಳಕ್ಕೆ ತಳ್ಳಿ ಹತ್ಯೆಗೈದಿದ್ದು ಇದಾದ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿ ಮದ್ಯ ವ್ಯಸನಿಯಾಗಿದ್ದು, ಮಾನಸಿಕ ಅಸ್ವಸ್ಥನಾಗಿದ್ದ ಎಂಬುದು ತಿಳಿದುಬಂದಿದೆ. ಪಲ್ಹಾಪುರದಲ್ಲಿ ರೈತನಾಗಿರುವ ವೀರೇಂದ್ರ ಸಿಂಗ್ ಅವರ ಪುತ್ರ ಅನುರಾಗ್ ಸಿಂಗ್ ನಿನ್ನೆ(ಶುಕ್ರವಾರ) ರಾತ್ರಿ ಈ ಕೊಲೆ ಮಾಡಿದ್ದಾನೆ. ಅಲ್ಲದೆ ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದ್ದು ಗ್ರಾಮದ ಜನ ಬೆಚ್ಚಿ ಬಿದ್ದಿದ್ದಾರೆ.

ಘಟನಾ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಸರ್ಕಾರ ಪತನ: ಆರ್ ಅಶೋಕ್
ಮುಂದಿನ ಲೇಖನವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ: ಬಿ.ಎಸ್. ಯಡಿಯೂರಪ್ಪ