ಮನೆ ರಾಜ್ಯ ತಲ್ವಾರ್ ಹಿಡಿದು ಜನರನ್ನು ಬೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಪೊಲೀಸರಿಂದ ಫೈರಿಂಗ್

ತಲ್ವಾರ್ ಹಿಡಿದು ಜನರನ್ನು ಬೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಪೊಲೀಸರಿಂದ ಫೈರಿಂಗ್

0

ಕಲಬುರಗಿ(Kalburgi): ನಗರದ ಸೂಪರ್ ಮಾರ್ಕೆಟ್‌’ನಲ್ಲಿ ಭಾನುವಾರ ರಾತ್ರಿ ಒಂದು ಕೈಯಲ್ಲಿ ತಲ್ವಾರ್ ಮತ್ತೊಂದು ಕೈಯಲ್ಲಿ ಚಾಕು ಹಿಡಿದುಕೊಂಡು ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ್ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಬ್ದುಲ್ ಜಾಫರ್‌ ಸಾಬ್ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ತಲ್ವಾರ್ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಮಾಹಿತಿ ತಿಳಿದು ಸ್ಥಳಕ್ಕೆ ದಾವಿಸಿದ ಪೊಲೀಸರು ಶರಣಾಗುವಂತೆ ಸೂಚಿಸಿದರು ಅವರ ಮೇಲೆಯೇ ಹಲ್ಲೆಗೆ ಮುಂದಾದ. ಹೀಗಾಗಿ, ಪಿಎಸ್‌’ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು ಗುಂಡು ಹಾರಿಸಿದರು.

ಕೊನೆಯ ಗುಂಡು ಆತನ ಕಾಲಿಗೆ ಬಡಿದಿದ್ದರಿಂದ ಕೆಳಗೆ ಬಿದ್ದ. ನಂತರ ಆತನನ್ನು ಸುತ್ತುವರೆದು ಬಂಧಿಸಿದರು.

ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಚೇತನ್ ಆರ್, ಡಿಸಿಪಿ ಅಡ್ಡೂರು ಶ್ರೀನಿವಾಸುಲು, ಎಸಿಪಿ ದೀಪನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಪೊಲೀಸರು ಆರೋಪಿ ಹಿನ್ನೆಲೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ಕುರಿತಂತೆ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಪೂರ್ಣ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಹಿಂದಿನ ಲೇಖನಕೋಲಾರದ ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆ ಖಾಲಿ ಇದೆ: ಆಸಕ್ತರು ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನಟರ್ಕಿಯಲ್ಲಿ 7.9 ತೀವ್ರತೆಯ ಪ್ರಬಲ ಭೂಕಂಪ: ಧರೆಗುರುಳಿದ ಕಟ್ಟಡಗಳು