ಮನೆ ಉದ್ಯೋಗ ಫೆ. 21 ಕ್ಕೆ ಬೃಹತ್ ಉದ್ಯೋಗ ಮೇಳ

ಫೆ. 21 ಕ್ಕೆ ಬೃಹತ್ ಉದ್ಯೋಗ ಮೇಳ

0

ಮೈಸೂರು:  ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ ಮೈಸೂರು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯವರ ಸಹಯೋಗದೊಂದಿಗೆ 2023 ರ ಫೆಬ್ರವರಿ 21 ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರ ದೊಡ್ಡಕೆರೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

 ಉದ್ಯೋಗ ಮೇಳದಲ್ಲಿ 100 ರಿಂದ 150 ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೊಮಾ, ಬಿ.ಇ, ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

 ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮೈಸೂರು-07 ಇವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ:0821-2489972 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಇಷ್ಟಾರ್ಥ ಸಿದ್ಧಿಗಾಗಿ ಮಹಾಶಿವರಾತ್ರಿಯಂದು ನಿಮ್ಮ ರಾಶಿಗನುಸಾರ ಶಿವನನ್ನು ಹೀಗೆ ಪೂಜಿಸಿ
ಮುಂದಿನ ಲೇಖನಇಂದಿನಿಂದ 10,12ನೇ ತರಗತಿ ಪರೀಕ್ಷೆ: ಚಾಟ್ ಜಿಪಿಟಿ ಬಳಕೆ ನಿಷೇಧ