ಬೆಂಗಳೂರು : 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ.
ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಆರಂಭದಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಮಂಗಳೂರಿಗೆ ಮೋದಿ, ರೋಡ್ ಶೋದಲ್ಲಿ ಭಾಗಿ: ಏಪ್ರಿಲ್ 14ರಂದು ಅಪರಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದ್ದು ಅಂದಿನ ಮೋದಿ ಸಮಾವೇಶ ರದ್ದಾಗಿದೆ. ಪ್ರಧಾನಿಯವರು ಏಪ್ರಿಲ್ 6ರಂದು ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಸಲಿದ್ದಾರೆ.
ಕಳೆದ ತಿಂಗಳು ಪ್ರಧಾನಿ ಮೋದಿ ಅವರು ಶಿವಮೊಗ್ಗ ಹಾಗೂ ಕಲಬುರಗಿಗೆ ಆಗಮಿಸಿ ಪ್ರಚಾರ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದೆ.