ಕೇರಳ: ನಿಂತಿದ್ದ ಬಸ್ ಒಂದಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್ಗಳಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ನಿರ್ಲಕ್ಷ್ಯದ ಚಾಲನೆಯೇ ಅಥವಾ ಅತಿವೇಗವೇ ಅಪಘಾತಕ್ಕೆ ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 25 ಕ್ಕೂ ಹೆಚ್ಚು ಜನರಲ್ಲಿ ಇಬ್ಬರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ತ್ರಿಶೂರ್‌ಗೆ ಕರೆದೊಯ್ಯಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನವಾಗಿದೆ ಎಂದು ಇರಿಂಜಲಕುಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Saval TV on YouTube