ಮನೆ ರಾಷ್ಟ್ರೀಯ ನಿಂತಿದ್ದ ಬಸ್ ​ಗೆ ಖಾಸಗಿ ಬಸ್ ಡಿಕ್ಕಿ​: 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ನಿಂತಿದ್ದ ಬಸ್ ​ಗೆ ಖಾಸಗಿ ಬಸ್ ಡಿಕ್ಕಿ​: 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

0

ಕೇರಳ: ನಿಂತಿದ್ದ ಬಸ್​ ಒಂದಕ್ಕೆ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್​ಗಳಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

Join Our Whatsapp Group

ನಿರ್ಲಕ್ಷ್ಯದ ಚಾಲನೆಯೇ ಅಥವಾ ಅತಿವೇಗವೇ ಅಪಘಾತಕ್ಕೆ ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ 25 ಕ್ಕೂ ಹೆಚ್ಚು ಜನರಲ್ಲಿ ಇಬ್ಬರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ತ್ರಿಶೂರ್‌ಗೆ ಕರೆದೊಯ್ಯಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನವಾಗಿದೆ ಎಂದು ಇರಿಂಜಲಕುಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿನ ಲೇಖನಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶ
ಮುಂದಿನ ಲೇಖನಟಿಪ್ಪುವಿನಂತೆಯೇ ಸಿದ್ದು ಮುಗಿಸಬೇಕು ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆಹೋದ ಮಾಜಿ ಸಚಿವ ಅಶ್ವತ್ಥನಾರಾಯಣ