ವಿಜಯಪುರ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಜಿಲ್ಲೆಯಲ್ಲಿ ಶನಿವಾರ ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ದೇವಣಗಾಂವ್ ಚೆಕ್ ಪೋಸ್ಟ್’ನಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದ ಕೆಎಲ್ 56 ಪಿ 1919 ಸಂಖ್ಯೆಯ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 9 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟಿನಲ್ಲೂ ದಾಖಲೆ ಇಲ್ಲದ ನಗದು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಸೋಲಾಪೂರ ದಿಂದ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣಕ್ಕೆ 407 ಕ್ಯಾಂಟರ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 49 ಲಕ್ಷ ರೂ. ನಗದು ಪತ್ತೆಯಾಗಿದೆ.
ಸದರಿ ವಾಹನ ಚಾಲಕ ತನ್ನ ಸೀಟ್ ಕೆಳಭಾಗದಲ್ಲಿ ಬ್ಯಾಗಿನಲ್ಲಿ ಇಟ್ಟುಕೊಂಡಿದ್ದ. ಆತನ ವರ್ತನೆಯಿಂದ ಅನುಮಾನಗೊಂಡ ಇಂಡಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 49 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಸದರಿ ಹಣ ಇಂಡಿ ಪಟ್ಟಣದ ಎಪಿಎಂಸಿ ವರ್ತಕರೊಬ್ಬರಿಗೆ ಸೇರಿದ ದಾಖಲೆ ಇಲ್ಲದೆ ನಗದು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಚುನಾವಣೆ ಆಯೋಗದ ನಿರ್ದೇಶನದಂತೆ ಈ ಕುರತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.