ಮನೆ ಸುದ್ದಿ ಜಾಲ ಬ್ಲಡ್‌ ಕ್ಯಾನ್ಸರ್‌ ಇದೆಯೆಂದು ತಿಳಿದು ಮಹಿಳೆ ಆತ್ಮಹತ್ಯೆಗೆ ಶರಣು

ಬ್ಲಡ್‌ ಕ್ಯಾನ್ಸರ್‌ ಇದೆಯೆಂದು ತಿಳಿದು ಮಹಿಳೆ ಆತ್ಮಹತ್ಯೆಗೆ ಶರಣು

0

ಮೈಸೂರು (Mysuru): ತನಗೆ ಬ್ಲಡ್‌ ಕ್ಯಾನ್ಸರ್‌ ಇದೆ ಎಂದು ತಿಳಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಎನ್.ಆರ್.ಮೊಹಲ್ಲಾದಲ್ಲಿ ನಡೆದಿದೆ.

ದೀಪಾ (41) ಆತ್ಮಹತ್ಯೆ ಮಾಡಿಕೊಂಡವರು. ಎನ್.ಆರ್.ಮೊಹಲ್ಲಾದ ದಿವಾಜಿ ರಸ್ತೆಯಲ್ಲಿ ವಾಸವಾಗಿದ್ದ ಇವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು.

ವೈದ್ಯರು ಪರೀಕ್ಷೆ ನಡೆಸಿದ ಬಳಿಕ ವರದಿಯಲ್ಲಿ ಬ್ಲಡ್‌ ಕ್ಯಾನ್ಸರ್‌ ಇರುವುದನ್ನು ದೃಢಪಡಿಸಿದ್ದರು. ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.