ಮನೆ ಅಪರಾಧ ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

0

ಬೆಂಗಳೂರು(Bengaluru): ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿಯಾದ ಪರಿಣಾಮ ಮಹಿಳೆ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ  ನಡೆದಿದೆ.

ನುತಾ ಮೃತಪಟ್ಟ ಮಹಿಳೆ.

ವಿನುತ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಈ ನಡುವೆ ಇಂದು ಕೆಲಸಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಫೋನ್ ಬಂತು ಎಂದು ಗಾಡಿ ಸೈಡಿಗೆ ಹಾಕಿ ವಿನುತಾ ಮಾತನಾಡುತ್ತಿದ್ದರು. ಈ ವೇಳೆ ಹಿಂದೆಯೇ ಬಸ್ ನಿಲ್ದಾಣದಲ್ಲಿ ಜನರನ್ನು ಹತ್ತಿಸಿ ಕೊಳ್ಳುತ್ತಿದ್ದ ಬಸ್ ಚಾಲಕ ಏಕಾಏಕಿ ಬಸ್ ಚಾಲನೆ ಮಾಡಿದ್ದಾನೆ.

ಈ ಸಮಯದಲ್ಲಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಮಹಿಳೆ ವಿನುತಾ ತಲೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಮೈಸೂರು: ಗುಮಾಸ್ತೆಯಾಗಿದ್ದ ನ್ಯಾಯಾಲಯದಲ್ಲೇ ನ್ಯಾಯಾಧೀಶರ ಹುದ್ದೆ ಅಲಂಕರಿಸಿದ ಎಚ್.ಆರ್. ಹೇಮಾ
ಮುಂದಿನ ಲೇಖನಅನುಮತಿ ಪಡೆಯದೇ ಹೈದರಾಬಾದ್ ವಿವಿ ಕ್ಯಾಂಪಸ್’ನಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಸಾಕ್ಷ್ಯಚಿತ್ರ ಪ್ರದರ್ಶನ