ಬೆಂಗಳೂರು: ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣ ಪ್ರಮುಖ ದ್ವಾರದಲ್ಲಿ ನೀಲಿ ಬಣ್ಣದ ಡ್ರಮ್ ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅನ್ನು ಆಟೋದಲ್ಲಿ ತಂದು ರೈಲ್ವೇ ನಿಲ್ದಾಣದಲ್ಲಿ ಇಟ್ಟು ಹೋಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಗೆ ಅಂದಾಜು 30 ವಯಸ್ಸಿರಬಹುದು ಎಂದು ಹೇಳಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ರೈಲ್ವೇ ಎಸ್ಪಿ ಸೌಮ್ಯಲತಾ, ನಮಗೆ ನೀಲಿ ಡ್ರಮ್ ನಿಂದ ಕೊಳೆತ ವಾಸನೆ ಬರುತ್ತಿದೆ ಎಂದು ದೂರವಾಣಿ ಕರೆ ಬಂದಿತ್ತು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಶವ ಇರುವುದು ಗೊತ್ತಾಗಿದೆ. ತನಿಖೆ ನಡೆಯುತ್ತಿದೆ. ಮೃತರು ಯಾರು ಎಂದು ಪತ್ತೆ ಹಚ್ಚಲಾಗುವುದು. ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದರು.