ಮನೆ ಅಪರಾಧ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

0

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ.

ಕಮಲೇಶ್ (36) ಮೃತ ದುರ್ದೈವಿ.

ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಮೂಲದ ಯುವತಿಯಿಂದಿಗೆ ವಿವಾಹ ನಿಶ್ಚಯವಾಗಿತ್ತು.

ಸ್ನಾನ ಮಾಡುವ ಸಂದರ್ಭದಲ್ಲಿ ಉಂಗುರ ಕಳೆದು ಹೋಗಿತ್ತು. ಈ ವಿಚಾರ ಮನೆಯವರಿಗೆ ಹೇಳಲು ಹೆದರಿ ಕಳೆದ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನರಾಜ್ಯಮಟ್ಟದ ಬಾಪೂಜಿ  ಪ್ರಬಂಧ ಸ್ಪರ್ಧೆ ಫಲಿತಾಂಶ
ಮುಂದಿನ ಲೇಖನಪರಿಶಿಷ್ಟ ಪಂಗಡಕ್ಕೆ ಸೇರಿದ ಹಳೆ ಮೈಸೂರು ಭಾಗದ ಪರಿವಾರ ಸಮುದಾಯ: ಗೊಂದಲ ನಿವಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ