ಬಂಟ್ವಾಳ: ಕಲ್ಲಡ್ಕದಲ್ಲಿ ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟಿದ್ದಾನೆ.
ಅರ್ಜುನ್ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.














