ಮನೆ ರಾಜ್ಯ ತುಂಗಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು..!

ತುಂಗಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು..!

0

ಶಿವಮೊಗ್ಗ : ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಯುವಕನ ಶವಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದರು. ನದಿಗೆ ಇಳಿದಿದ್ದ ಕೆಲವೇ ಅಡಿಯ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ. ಮೃತನನ್ನು ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ.

ಏ.7ರ ಸಂಜೆ ಕಲ್ಲು ಬಂಡೆ ಮೇಲೆ ಮೊಬೈಲ್, ಚಪ್ಪಲಿ, ಬಟ್ಟೆಯನ್ನು ಇಟ್ಟು ಈಜಲು ಹೋಗಿ ಕಣ್ಮರೆಯಾಗಿದ್ದ. ಯುವಕನ ಶವವನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.