ಬಳ್ಳಾರಿ: ತಂದೆಯ ಮಾನಸಿಕ ಅಸ್ವಸ್ಥೆ ನೋಡಿದವರು ತನಗೆ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಡೇಕೋಟೆಯ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನೆರೆಯ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ಯುವಕ ಬಿ.ಮಧುಸೂದನ್ (26) ಮೃತ ದುರ್ದೈವಿ.
ತನಗೆ ಮದುವೆ ವಯಸ್ಸಾಗಿದ್ದರೂ ಯಾರೊಬ್ಬರು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ. ಕೆಲವರು ಒಪ್ಪಿದರೂ, ಮನೆಯಲ್ಲಿ ನನ್ನ ತಂದೆಯ ಮಾನಸಿಕ ಅಸ್ವಸ್ಥತೆಯನ್ನು ನೋಡಿ ಹೆಣ್ಣು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಬೇಸತ್ತ ಯುವಕ, ಗ್ರಾಮದ ಹೊರವಲಯದ ವೇಣಿ ಈರಪ್ಪ ಮಠದ ಬಳಿ ಕಳೆದ ಜ.5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ನಲ್ಲಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ನಿಧನನಾಗಿದ್ದಾನೆ.
ಈ ಕುರಿತು ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














