ಮನೆ ರಾಜ್ಯ ಮಂಗಳಮುಖಿ ಜೊತೆ ಯುವಕನ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು..!

ಮಂಗಳಮುಖಿ ಜೊತೆ ಯುವಕನ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು..!

0

ಬಳ್ಳಾರಿ : ಪ್ರೇಮಿಗಳಿಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿಯ ಇಂದಿರಾನಗರದ ಡೈರಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಮಂಗಳಮುಖಿ ಸುಹಾಸಿನಿ (29) ಹಾಗೂ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಯ ಶೇಖರ್ (27) ಮೃತರು.

ಮಂಗಳಮುಖಿ ಸುಹಾಸಿನಿಯನ್ನು ಕೊಲೆ ಮಾಡಿ ಬಳಿಕ ಶೇಖರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸುಹಾಸಿನಿ ಹಾಗೂ ಶೇಖರ್ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರ ಪ್ರೀತಿ ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಮಧ್ಯೆ ಅವರಿಬ್ಬರ ಶವ ಅವರ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ.

ಇಂದಿರಾ ನಗರದ ಮನೆಯಲ್ಲಿ ಮಂಗಳಮುಖಿ ಸುಹಾಸಿನಿ ಹಾಗೂ ಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಬ್ಬರಲ್ಲಿ ಒಬ್ಬರ ಕೊಲೆಯಾಗಿದ್ದು, ಇನ್ನೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಸುಹಾಸಿನಿ ಕುಟುಂಬಸ್ಥರ ಆಕ್ರಂದನ‌ ಮುಗಿಲು ಮುಟ್ಟಿದ್ದು, ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರ ಸಾವಿನ ಬಗ್ಗೆ ತನಿಖೆ ಶುರುಮಾಡಿದ್ದಾರೆ.