ಮನೆ ರಾಜ್ಯ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವು ..!

ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವು ..!

0

ಬೆಂಗಳೂರು : ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರೋ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಇಲ್ಲಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್‌ ಲೀಗ್ ನೋಡೋಕೆ ಹೋಗಿದರು.

ಕ್ರಿಕೆಟ್ ಮ್ಯಾಚ್ ನೋಡಿಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೇ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್‌ನಲ್ಲಿದ್ದ ಭಾಸ್ಕರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನು ಇಲ್ಲಿನ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.