ಮನೆ ಸುದ್ದಿ ಜಾಲ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ̧ ಯುವತಿ ಸಾವು

ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ̧ ಯುವತಿ ಸಾವು

0

ಬೆಂಗಳೂರುನೂತನ ಚೆನ್ನೈ ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರ್ಸಿಡಿಸ್ ಬೆಂಜ್​ ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಚಾಲಕ ಪರಾರಿಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿಯ ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂಬುದ್ದಾಗಿದೆ.

ಈ ಕುರಿತು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತಕ್ಕೆ ಇನ್ನು ನಿಖರ ಕಾರಣ ತಿಳಿದುಬಂದಿಲ್ಲ. ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಚಾಲಕನ ಪತ್ತೆ ನಂತರ ಅಪಘಾತದ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹೊಸಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.