ರಾಜಸ್ಥಾನ: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.
ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ. ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
Saval TV on YouTube