ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ರಾಗಿ ಆಯ್ಕೆಯಾದರು.
ಬಿಜೆಪಿ ಅಭ್ಯರ್ಥಿ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಅವರು ದೆಹಲಿ ಮೇಯರ್ ಆಗಿ ಮರು ಆಯ್ಕೆಯಾಗಿದ್ದಾರೆ.
ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ಇಂದು ಮತದಾನ ನಡೆಯಿತು.
ಮೇಯರ್ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದಿಂದ ಶೈಲಿ ಒಬೆರಾಯ್ ಮತ್ತು ಬಿಜೆಪಿಯಿಂದ ಶಿಖಾ ರೈ ಕಣದಲ್ಲಿದ್ದರು.
ಎಎಪಿಯ ಹಾಲಿ ಉಪಮೇಯರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಬಿಜೆಪಿ ಅಭ್ಯರ್ಥಿ ಸೋನಿ ಪಾಲ್ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ. ಮೇಯರ್ ಚುನಾವಣೆಯ ಫಲಿತಾಂಶವನ್ನು ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ.
“ಈ ಬಾರಿ ಅವಿರೋಧವಾಗಿ ಮೇಯರ್ ಮತ್ತು ಉಪಮೇಯರ್ ಆಗಿರುವ ಶೆಲ್ಲಿ ಮತ್ತು ಅಲೆ ಅವರಿಗೆ ಅಭಿನಂದನೆಗಳು. ಇಬ್ಬರಿಗೂ ಶುಭಾಶಯಗಳು. ಜನರು ನಿಮ್ಮಿಂದ ಭಾರೀ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಿ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.