ಮನೆ ರಾಷ್ಟ್ರೀಯ ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್ ನಖ್ವಿ ರಾಜೀನಾಮೆ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಸಾಧ್ಯತೆ

ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್ ನಖ್ವಿ ರಾಜೀನಾಮೆ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಸಾಧ್ಯತೆ

0

ನವದೆಹಲಿ(New Delhi): ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್‌ ನಖ್ವಿ ರಾಜೀನಾಮೆ ಸಲ್ಲಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಗಳಿವೆ.

ಅಬ್ಬಾಸ್‌ ನಖ್ವಿ ಅವರು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ ಹೊಣೆ ಹೊತ್ತಿದ್ದರು.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಬಿಜೆಪಿಯ ಹಿರಿಯ ನಾಯಕ ನಖ್ವಿ ಅವರನ್ನು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸುವ ಸಾಧ್ಯತೆ ಇದೆ. ಉಪ ರಾಷ್ಟ್ರಪತಿ ಸ್ಥಾನದ ರೇಸ್ ನಲ್ಲಿ ಅಬ್ದುಲ್ ನಜೀರ್, ಅಮರಿಂದರ್ ಸಿಂಗ್ ಮತ್ತು ಅಬ್ಬಾಸ್ ನಖ್ವಿ ಮೂರು ಜನರಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.