ಮನೆ ಮನರಂಜನೆ ಪಂಚಭೂತಗಳಲ್ಲಿ ಲೀನವಾದ ಅಭಿನಯ ಸರಸ್ವತಿ ಬಿ.ಸರೋಜಾದೇವಿ

ಪಂಚಭೂತಗಳಲ್ಲಿ ಲೀನವಾದ ಅಭಿನಯ ಸರಸ್ವತಿ ಬಿ.ಸರೋಜಾದೇವಿ

0

ಬೆಂಗಳೂರು : ಅಭಿನಯ ಸರಸ್ವತಿಯಂದೆ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಅವರ ಹುಟ್ಟುರಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಹಿರಿಯ ನಟಿ ಬಿ ಸರೋಜಾ ದೇವಿ ಪಂಚಭೂತಗಳಲ್ಲಿ ಲೀನವಾದರು. ಸಕಲ ಸರ್ಕಾರಿ ಗೌರವದೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ ನೆರವೇರಿತು. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲಿ ನೆರವೇರಿತು. ಈ ವೇಳೆ ಪತ್ರ ಗೌತಮ್ ಅಂತಿಮ ವಿಧಿ ವಿಧಾನ ಪೂರೈಸಿದ್ದು, ಒಕ್ಕಲಿಗ ಸಂಪ್ರದಾಯದಂತೆ ಆತ್ಯಕ್ರಿಯೆ ನೆರವೇರಿತು. ಈ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮೂರು ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿತು. ಅಂತ್ಯಕ್ರಿಯೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಾಸಕ ಸಿಪಿ ಯೋಗೇಶ್ವರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.