ಬೆಂಗಳೂರು:ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡುವಂತಿಲ್ಲ.
ಮುಂದಿನ 6 ತಿಂಗಳು ಹಾಜರಾತಿ ಹಾಕಬೇಕು ಎಂದು ಸೂಚನೆ ನೀಡಿ ನ್ಯಾಯಾಲಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ಮಾಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣರನ್ನು ಜೂನ್.23ರಂದು ಬಂಧಿಸಲಾಗಿತ್ತು. ಸೋಮವಾರ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
Saval TV on YouTube