ಮನೆ ರಾಜ್ಯ ನಾಲ್ಕು ಬಾರಿ ಸಾಮಾನ್ಯ ಸಭೆಗೆ ಗೈರು: ಅಂಕನಾಯಕ ಸದಸ್ಯತ್ವ ರದ್ದು- ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ...

ನಾಲ್ಕು ಬಾರಿ ಸಾಮಾನ್ಯ ಸಭೆಗೆ ಗೈರು: ಅಂಕನಾಯಕ ಸದಸ್ಯತ್ವ ರದ್ದು- ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಮರು ಚುನಾವಣೆ

0

ಮೈಸೂರು: ಸರಗೂರು ತಾಲ್ಲೂಕು ಬಿದರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಂಕನಾಯಕ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗೆ ಗೈರು ಹಾಜರಾಗಿದ್ದು, ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.

Join Our Whatsapp Group

ಅಂತೆಯೇ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿದರಹಳ್ಳಿ ಗ್ರಾಮ ಪಂಚಾಯಿತಿ ಒಂದು ಸದಸ್ಯ ಸ್ಥಾನಕ್ಕೆ ಮರು ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಗಳು ದಿ:9-11-2022, 9-12-2022, 9-01-2023, 9-02-2023 ರಲ್ಲಿ ನಡೆದ ಸಭೆಗೆ ಸತತವಾಗಿ ನಾಲ್ಕು ಭಾರಿ ಗೈರು ಹಾಜರಾಗಿದ್ದು ಈ ಸಂಬಂಧ ನೋಟೀಸ್ ಅನ್ನು ಕೂಡ ನೀಡಲಾಗಿರುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಗ್ರಾಮ ಪಂಚಾಯತ್ ಹಾಗೂ ಸ್ಥಾಯಿ ಸಮಿತಿಗಳ ರಚನೆ ಪ್ರಕರಣ 43ಎ ರಂತೆ ಅಂಕನಾಯಕ ಸತತ 4 ಸಭೆಗಳಿಗೆ ಗೈರಾಗಿರುವುದರಿಂದ ಅವರ ಸದಸ್ಯತ್ವವನ್ನು ರದ್ದುಪಡಿಸಿ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದ್ದರಿಂದ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿದರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಮರು ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಟೈಯರ್ ಸಿಡಿದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಲಾರಿ: ಚಾಲಕ ಪಾರು
ಮುಂದಿನ ಲೇಖನವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? : ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ