ಮನೆ ರಾಜ್ಯ ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಸಚಿವ ದಿನೇಶ್ ಗುಂಡೂರಾವ್

ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಸಚಿವ ದಿನೇಶ್ ಗುಂಡೂರಾವ್

0

ಮೈಸೂರು: ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗರಿಗೆ ಮೋದಿ ಎದುರು ಮಾತನಾಡುವ ಧೈರ್ಯವಿಲ್ಲ. ಪರಿಹಾರ ರೀಲಿಸ್ ಮಾಡಿದ್ದರೇ ಪ್ರತಿಭಟನೆ ಮಾಡುತ್ತಿರಲಿಲ್ಲ. ಬಿಜೆಪಿ ಮಾಡುವುದೆಲ್ಲಾ ಅಧರ್ಮದ ಕೆಲಸ. ನಾವು ಅನಿವಾರ್ಯವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು.

ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಅವರ ವಿರುದ್ಧ ಮಾತನಾಡಿದವರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯವರೇ ಬಿಜೆಪಿ ವರಿಷ್ಟರನ್ನು ಪ್ರಶ್ನಿಸುವಂತಿಲ್ಲ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದರು.

ಹಿಂದಿನ ಲೇಖನಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿವೆ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಮಧು ಬಂಗಾರಪ್ಪ
ಮುಂದಿನ ಲೇಖನಕಾನೂನಿನ ಅನ್ವಯ ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ