ಬೆಂಗಳೂರು(Bengaluru): ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿ ಪಿಎಫ್ ಐ ಮತ್ತು ಎಸ್ ಡಿಪಿಐ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ಎಸ್ ಡಿಪಿಐ, ಪಿಎಫ್ ಐ ನಿಷೇಧಿಸುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶ ಪಡಿಸಿಕೊಂಡಿದ್ದಾರೆ.