ಮನೆ ರಾಜ್ಯ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

0

ಬೆಂಗಳೂರು (Bengaluru): ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್‌ ಅಹ್ಮದ್‌ ಖಾಗ್‌ ಗೆ ಎಸಿಬಿ ನೋಟಿಸ್‌ ನೀಡಿದೆ.

ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

ಜುಲೈ 5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ದಾಳಿಯ ಬಳಿಕ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಸೂಚಿಸಿತ್ತು. ಆದರೆ ಬಕ್ರೀದ್ ಹಬ್ಬದ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇದೀಗ ಹಬ್ಬದ ಬಳಿಕ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.