ಮನೆ ರಾಜ್ಯ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

0

ಬೆಂಗಳೂರು (Bengaluru): ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್‌ ಅಹ್ಮದ್‌ ಖಾಗ್‌ ಗೆ ಎಸಿಬಿ ನೋಟಿಸ್‌ ನೀಡಿದೆ.

ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

ಜುಲೈ 5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ದಾಳಿಯ ಬಳಿಕ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಸೂಚಿಸಿತ್ತು. ಆದರೆ ಬಕ್ರೀದ್ ಹಬ್ಬದ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇದೀಗ ಹಬ್ಬದ ಬಳಿಕ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಹಿಂದಿನ ಲೇಖನತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಮುಂದಿನ ಲೇಖನನಾಳೆ ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ