ಮನೆ ಅಪರಾಧ ಮಂಡ್ಯ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ

ಮಂಡ್ಯ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ

0

ಮಂಡ್ಯ: ಶ್ರೀರಂಗಪಟ್ಟಣದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಸರ್ವೇ ಅಧಿಕಾರಿ 10 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಶ್ರೀರಂಗಪಟ್ಟಣದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಲೋಕೇಶ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.

ಲೋಕೇಶ್ ಜಮೀನು ದುರಸ್ತಿಗೆ 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಮುಂಚೆಯೇ 3 ಸಾವಿರ ಹಣವನ್ನು ಮುಂಚಿತವಾಗಿ ಪಡೆದುಕೊಂಡಿದ್ದರು. ಇಂದು 10 ಸಾವಿರ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲೋಕೇಶ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪುರುಷೋತ್ತಮ, ವಿನೋದ್ ರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಮಹದೇವು, ಕುಮಾರ್, ಪಾಪಣ್ಣ, ವೆಂಕಟೇಶ್, ಮಹೇಶ್ ಭಾಗಿಯಾಗಿದ್ದರು.

ಹಿಂದಿನ ಲೇಖನರಾಷ್ಟ್ರೀಯ ಮತದಾರರ ದಿನಾಚರಣೆ
ಮುಂದಿನ ಲೇಖನರಾಗಿ, ಭತ್ತದ ಬೆಂಬಲ ಬೆಲೆ ಹೆಚ್ಚಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ