ಮನೆ ಅಪರಾಧ ಒಂದು ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬದ್ದ ಸಿಇಒ

ಒಂದು ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬದ್ದ ಸಿಇಒ

0

ಮೈಸೂರು: ಟೆಂಡರ್ ಪಡೆದ ವ್ಯಕ್ತಿಯೊಬ್ಬರಿಗೆ ಕಾರ್ಯಾದೇಶ ನೀಡಲು ನಗರದ  ಕರ್ನಾಟಕ ವಸ್ತು ಪ್ರದರ್ಶನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಂಚ ಕೇಳಿದ್ದು, ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಗಿರೀಶ್ ಅವ​ರನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

 ಪ್ರಾಧಿಕಾರಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಟೆಂಡರ್‌ ತೆಗೆದುಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾರ್ಯಾದೇಶ ನೀಡಲು ಗಿರೀಶ್ ಒಂದು ಲಕ್ಷ ರೂ. ಬೇಡಿಕೆ ಇರಿಸಿದ್ದರು. ಗುರುವಾರ ಸಂಜೆ ತಮ್ಮ ಕಚೇರಿಯಲ್ಲಿ ಹಣವನ್ನು ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಗಿರೀಶ್‌ ಅವರನ್ನು ವಶಕ್ಕೆ ಪಡೆದಿದ್ದಾರೆ.ಎಸಿಬಿ ಇನ್ಸ್​ಪೆಕ್ಟರ್‌ಗಳಾದ ಮೋಹನ್‌ಕೃಷ್ಣ ಹಾಗೂ ಚಿತ್ತರಂಜನ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಹಿಂದಿನ ಲೇಖನಕೊರೋನಾ: ಬೆಂಗಳೂರಿನಲ್ಲಿ 74 ಸೇರಿ 109 ಮಂದಿಗೆ ಪಾಸಿಟಿವ್
ಮುಂದಿನ ಲೇಖನಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ