ಹಾವೇರಿ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಜಾಪರ್ ಸಂಶಿ ಬಂಧಿತ ಆರೋಪಿ.
ದಾದಾಪೀರ್ ಲೋಹರ್ ಎಂಬವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಮಹಮ್ಮದ್ ಜಾಪರ್ ಸಂಶಿ 40 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟದ್ದರು. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.