ಮನೆ ಅಪರಾಧ ಕಾರು – ಲಾರಿ ಮಧ್ಯೆ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ ಪತ್ನಿ

ಕಾರು – ಲಾರಿ ಮಧ್ಯೆ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ ಪತ್ನಿ

0

ಬೆಳಗಾವಿ: ಲಾರಿ – ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

Join Our Whatsapp Group

ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ ಕೋಳಿ (32) ಸ್ಥಳದಲ್ಲೇ ಸಾವನ್ನಪ್ಪಿದ್ದ ವೈದ್ಯೆ. ಆಶಾ ಅವರ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೈದ್ಯರು ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.