ಕಾಪು : ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು, ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Saval TV on YouTube