ಗದಗ: ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.
ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು. ಬಾಲೆ ಹೊಸೂರ ಮಠಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube