ಮಡಿಕೇರಿ: ಕೆಎಸ್’ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ.
ಸದರಿ ಘಟನೆ ಜಿಲ್ಲೆಯ ಗಡಿಭಾಗ ಸಂಪಾಜೆ ಸಮೀಪ ನಡೆದಿದೆ.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಕೆಎಸ್’ಆರ್’ಟಿಸಿ ಬಸ್ ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿತ್ತು. ಸಂಪಾಜೆ ಪೆಟ್ರೋಲ್ ಬಂಕ್ ಸಮೀಪ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮೃತಪಟ್ಟವರ ವಿವರ ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಸದ್ಯ ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.














