ಮನೆ ಸುದ್ದಿ ಜಾಲ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0

ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌.

ಮೆಜೆಸ್ಟಿಕ್​ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.‌ ಕೂಡಲೇ ಬಿಎಂಟಿಸಿ ಚಾಲಕ ಬಸ್​ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.

ಇನ್ನು ಬೆಂಕಿಗೆ ಬಸ್​ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನಾಸ್ಥಳಕ್ಕೆ ವಿವಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಹಿಂದಿನ ಲೇಖನಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ
ಮುಂದಿನ ಲೇಖನಬೆಂಗಾಲ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಗೆ ರೋಚಕ ಸೋಲು