ಮನೆ ಅಪರಾಧ ಬೆಂಗಳೂರು – ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಆಟೋ ಚಾಲಕನ ಸ್ಥಿತಿ ಗಂಭೀರ

ಬೆಂಗಳೂರು – ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಆಟೋ ಚಾಲಕನ ಸ್ಥಿತಿ ಗಂಭೀರ

0

ಬೆಂಗಳೂರು(Bengaluru): ಬೆಂಗಳೂರು- ಮೈಸೂರು ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿದ ಆಟೋವೊಂದು ಸಂಪೂರ್ಣ ಜಖಂಗೊಂಡಿರುವ ಪರಿಣಾಮ ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿ ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ವೇಳೆ ಆಟೋದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆಗೆ ಸ್ಥಳೀಯರು ಅರ್ಧ ಗಂಟೆಯ ಕಾಲ ಹರಸಾಹಸಪಟ್ಟು ಬಳಿಕ ಆಸ್ಪತ್ರೆಗೆ ದಾಖಲಿಸಿದರು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಮೈಸೂರು ರಸ್ತೆಯಲ್ಲಿ ಮೂರು ಕಿಲೋಮೀಟರ್​ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.