ಬೀದರ್ (Bidar): ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ತಾಲೂಕಿನ ಬಂಗೂರು ಬಳಿ ಅಪಘಾತ ಸಂಭವಿಸಿದ್ದು, ಮೃತರು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಮನ್ನಾಕೇಳಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಬೇಗಂಪೇಟೆ ನಿವಾಸಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.














