ಮನೆ ರಾಜ್ಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: ಇಬ್ಬರು ಸವಾರರ ಸಾವು

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: ಇಬ್ಬರು ಸವಾರರ ಸಾವು

0

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌’ಪ್ರೆಸ್‌’ವೇ ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Join Our Whatsapp Group

ಮೃತರನ್ನು ಸನಾವುಲ್ಲಾ ಬೇಗಂ (65) ಮತ್ತು ನೂರ್ ಜಹಾನ್(60) ಎಂದು ಗುರುತಿಸಲಾಗಿದೆ.

ಮೃತರು ಬೆಂಗಳೂರಿನ ಬಾಪೂಜಿ ನಗರದ ನಿವಾಸಿಗಳಾಗಿದ್ದು, ಕಾರ್ಯಕ್ರಮ ನಿಮಿತ್ತ ರಾಮನಗರಕ್ಕೆ ಬಂದಿದ್ದರು.

ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದಾಗ ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಅಪಘಾತ ಸ್ಥಳಕ್ಕೆ‌ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಜರಾಜೇಶ್ವರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಿದ್ದಾರೆ.

ಹಿಂದಿನ ಲೇಖನಫ್ರೀ ಬಸ್ಸಿನಲ್ಲಿ ಹೆಂಡತಿ ಜಾಲಿ ಟ್ರಿಪ್: ಬಸ್ ಅಡಿ ಬಿದ್ದು ಸಾಯಲು ಹೋದ ಕುಡುಕ ಗಂಡ                                                         
ಮುಂದಿನ ಲೇಖನವಿನಾಕಾರಣ ಪ್ರಧಾನಿಯನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ: ಬಿಜೆಪಿ ಮುಖಂಡ ಜೋಗಿ ಮಂಜು