ಮನೆ ಸುದ್ದಿ ಜಾಲ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

0

ರಾಮನಗರ : ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಕಾರು ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.

ಮೈಸೂರಿನಿಂದ ಬೆಂಗಳೂರು ಕಡೆ ಹೋಗ್ತಿದ್ದ ಕಾರುಗಳ ನಡುವೆ ಅಪಘಾತ ನಡೆದಿದೆ. ಮುಂದೆ ಹೋಗುತ್ತಿದ್ದ ಟಾಟಾ ಇಂಡಿಕಾ ಕಾರಿಗೆ ಪೋಲೊ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಇಂಡಿಕಾ ಕಾರು ಪಕ್ಕದ ರಸ್ತೆಗೆ ಉರುಳಿಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.