ಹಾವೇರಿ: ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (NH 4) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಮೃತ ನಾಲ್ವರೂ ಹಾವೇರಿ ಪಟ್ಟಣದ ಅಶ್ವಿನಿ ನಗರದ ನಿವಾಸಿಗಳಾಗಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು.
ಮಧ್ಯರಾತ್ರಿ 12.30ರ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಹಾವೇರಿ ಎಸ್ ಪಿ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದರು.
Saval TV on YouTube