ಮನೆ ರಾಜ್ಯ ಉತ್ತರ ಪ್ರದೇಶದಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ: ಸಂತ್ರಸ್ತರ ನೆರವಿಗೆ ಯೋಗಿ ಆದಿತ್ಯನಾಥ್ ಜೊತೆ ಬೊಮ್ಮಾಯಿ ಮಾತುಕತೆ

ಉತ್ತರ ಪ್ರದೇಶದಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ: ಸಂತ್ರಸ್ತರ ನೆರವಿಗೆ ಯೋಗಿ ಆದಿತ್ಯನಾಥ್ ಜೊತೆ ಬೊಮ್ಮಾಯಿ ಮಾತುಕತೆ

0

ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ‌ ಬಸ್‌ (TT) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು ೯ ಜನರು ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ತಾವು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜೀ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.