ಹಾವೇರಿ : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದೆ. 10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದ್ದು, 4 ಲಕ್ಷ ಮೌಲ್ಯದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ.
ಈ ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.















