ಮನೆ ರಾಜ್ಯ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಕ್ಷೇತ್ರದ ಪರ ನಿಂತ ಪವನ್ ಕಲ್ಯಾಣ್

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಕ್ಷೇತ್ರದ ಪರ ನಿಂತ ಪವನ್ ಕಲ್ಯಾಣ್

0

ಮಂಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ನಿಂತಿದ್ದಾರೆ.

ಈ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಬರುತ್ತಿದೆ. ಇದೀಗ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಿಂತಿದ್ದು, ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಆಗಮಿಸಲಿದ್ದಾರೆ.

ಗುರುವಾರ (ಸೆ.11) ಪವನ್ ಕಲ್ಯಾಣ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಸೇವೆ ನೆರವೇರಲಿದ್ದು, ಈ ಮೂಲಕ ಕ್ಷೇತ್ರದ ಅಪಪ್ರಚಾರ ವಿರುದ್ಧ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಇದೇ ವೇಳೆ ದೇವಸ್ಥಾನದ ಮುಂಭಾಗದಲ್ಲಿ ವಿಶೇಷ ಆರತಿ ಸೇವೆ ನಡೆಯಲಿದೆ.