ಮನೆ ಅಪರಾಧ ಜಾಮೀನಿನ ಮೇಲೆ ಹೊರ ಬಂದು ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆರೋಪಿ ಆತ್ಮಹತ್ಯೆ

ಜಾಮೀನಿನ ಮೇಲೆ ಹೊರ ಬಂದು ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆರೋಪಿ ಆತ್ಮಹತ್ಯೆ

0

ಜಾಮೀನಿನ ಮೇಲೆ ಹೊರಬಂದಿದ್ದ ಕೊಲೆ ಪ್ರಕರಣದ ಆರೋಪಿ, ಪತ್ನಿ, ಮೂವರು ಮಕ್ಕಳನ್ನು ಕೊಲೆ ಮಾಡಿದ್ದು, ಕೊನೆಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.

Join Our Whatsapp Group

ಭೈದಾನಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಆರೋಪಿ ರಾಜೇಂದ್ರ ಗುಪ್ತಾ (45) ತನ್ನ ಪತ್ನಿ ನೀತು ಗುಪ್ತಾ (43), ಅವರ ಮಕ್ಕಳಾದ ನವೇಂದ್ರ (25) ಮತ್ತು ಸುಬೇಂದ್ರ (15) ಮತ್ತು ಪುತ್ರಿ ಗೌರಂಗಿ(16) ಅವರು ಮಲಗಿದ್ದಾಗ ಗುಂಡಿಕ್ಕಿ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆ ಬಳಿಕ ಮನೆ ಬಿಟ್ಟು ಹೋಗಿದ್ದರು, ಬಳಿಕ ನಗರದ ರೊಹನಿಯಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ರಾಜೇಂದ್ರ ಗುಪ್ತಾ ಅವರ ತಾಯಿ, ದಂಪತಿ ಪದೇ ಪದೇ ಜಗಳವಾಡುತ್ತಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರಾಜೇಂದ್ರ ವಿರುದ್ಧ 1997 ರಿಂದ ಕೊಲೆ ಪ್ರಕರಣವಿದ್ದು, ಜಾಮೀನಿನ ಮೇಲೆ ಹೊರಬಂದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಆತ್ಮಹತ್ಯೆಯೋ ಎಂಬುದರ ತನಿಖೆ ನಡೆಯುತ್ತಿದೆ.